ಬೈಂದೂರು:-ಬಹುನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, 189 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ನಿನ್ನೆಯಷ್ಟೇ ಬಿಡುಗಡೆಗೊಂಡಿದೆ. ಆದರೆ ಬೈಂದೂರು ಸೇರಿದಂತೆ ಉಳಿದ 35 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮಗೊಂಡಿಲ್ಲ. ಹೀಗಾಗಿ ಬೈಂದೂರು ಹಾಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ದಟ್ಟವಾಗಿದೆ.
ಜೊತೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಮಾಜೀ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ವಯಸ್ಸಿನ ಕಾರಣ ನೀಡಿ ಈ ಬಾರಿ ಬಿಜೆಪಿ ಶಾಸಕ ಸುಕುಮಾರ ಶೆಟ್ಟಿಗೆ ಟಿಕೆಟ್ ನಿರಾಕರಿಸಿದ್ದು, ಚುನಾವಣಾ ರಾಜಕೀಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಜೊತೆಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿಯವರನ್ನು ಸೋಲಿಸಲು ಕೆ. ಜಯಪ್ರಕಾಶ್ ಹೆಗ್ಡೆ ಸೂಕ್ತ ಆಯ್ಕೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ