ಉಡುಪಿ:-ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ ಇಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಎಂಸಿಎ0ಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಪ್ರತ್ಯೇಕ ಕಚೇರಿಯನ್ನು ತೆರೆದಿದ್ದು, ಇಲ್ಲಿ 24*7 ಜಾಹೀರಾತುಗಳನ್ನು ಪರಿಶೀಲಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ