ಕಾರ್ಕಳ: ಗ್ಯಾಸ್ ಗೀಝರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಸ್ನಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮೃತರನ್ನು ಕಾರ್ಕಳ ಕಾರ್ಪೋರೇಶನ್ ಬ್ಯಾಂಕ್ ಎದುರು ವೆಂಕಟರಮಣ ದೇವಸ್ಥಾನದ ಬಳಿ ನಿವಾಸಿ ಪ್ರಕಾಶ್ ಮಲ್ಯ(74) ಎಂದು ಗುರುತಿಸಲಾಗಿದೆ.
ಇವರು ಎ.8ರಂದು ಬೆಳಗಿನ ಜಾವ ಮನೆಯಲ್ಲಿ ಸ್ನಾನ ಮಾಡುತ್ತಿರುವಾಗ ಬಿಸಿ ನೀರಿಗೆ ಅಳವಡಿಸಿದ ಗ್ಯಾಸ್ ಗೀಝರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಈ ಬೆಂಕಿ ಇವರ ಮೈಗೆ ತಗುಲಿದ್ದು ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ