ಉಡುಪಿ: ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು ಪಕ್ಷೇತರನಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಮಾಡಿದ್ದ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಅವರು ಕಡೇ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಅಧಿಕೃತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ.
ಉಡುಪಿ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಪರವಾಗಿ ರೋಡ್ ಶೋ ನಡೆಸಲು ಉಡುಪಿಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದರು.
ಈ ವೇಳೆ ಕೃಷ್ಣಮೂರ್ತಿ ಅವರು ಕೆಲವೊಂದು ಬೇಡಿಕೆ ಇಟ್ಟಿದ್ದು, ಇದಕ್ಕೆ ಡಿಕೆಶಿ ಒಪ್ಪಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಸಂಧಾನ ಯಶಸ್ವಿಯಾಗಿದ್ದು, ಕೃಷ್ಣಮೂರ್ತಿ ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ