ಉಡುಪಿ, ಎ.30: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 2ರಿಂದ 5ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಕೇಮಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, ಕಾರ್ಕಳ ಉಪಕೇಂದ್ರದಿಂದ ಹೊರಡುವ ಪದವು ಫೀಡರ್ ಹಾಗೂ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಫೀಡರ್‌ಗಳ ನಿಟ್ಟೆ, ನಿಟ್ಟೆಕಾಲೇಜು, ವಾಟರ್ ಸಪ್ಲೈ, ಬೋರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು, ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿ ಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 2 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ ಶಿವಪುರ, ಚಾರ, ಮುದ್ರಾಡಿ ಫೀಡರ್‌ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಚಾರ, ಹೊಸೂರು, ಶಿವಪುರ, ಕೆರೆಬೆಟ್ಟು, ಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರ ಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ3 ರಂದು ಬೆಳಗ್ಗೆ 8.30ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಶಿರ್ವ ಎಂ.ಯು.ಎಸ್.ಎಸ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಉಪಕೇಂದ್ರ ದಿಂದ ಹೊರಡುವ ಎಲ್ಲಾ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರಿಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 3 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬ್ರಹ್ಮಾವರ ಉಪವಿದ್ಯುತ್‌ಕೇಂದ್ರದಿಂದ ಹೊರಡುವ ಚಾಂತಾರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ ಮತ್ತು ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 3ರಂದು ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್‌ಪ್ರೆಸ್ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 4ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಲೈನ್‌ಶಿಫ್ಟಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬೈಲೂರು ಎಕ್ಸ್‌ಪ್ರೆಸ್, ಕೆ.ಎಚ್.ಬಿ ಪದವು ಮತ್ತು ನಕ್ರೆ ಫೀಡರ್‌ಗಳ ಬೈಲೂರು, ಜಾರ್ಕಳ, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್‌ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕೆ.ಹೆಚ್.ಬಿ ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 5ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ