.ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಮೂರು ದಿನ ಬಾರ್ಗಳು ಬಾಗಿಲು ಮುಚ್ಚಲಿವೆ.ಮತದಾನ ದಿನ ಹಾಗೂ ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು ಘೋಷಣೆ ಮಾಡಲಾಗಿದೆ.
ಮೇ.10ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯದಂಗಡಿಗಳನ್ನು ಬಂದ್ ಮಾಡಲು ಅಬಕಾರಿ ಇಲಾಖೆ ಮುಂದಾಗಿದೆ. ಮೇ 8ರಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಿಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಮತ ಎಣಿಕೆ ದಿನವಾದ ಮೇ 13ರಂದು ಬೆಳಗ್ಗೆ 6ರಿಂದ, ಮೇ.14ರ ಬೆಳಗ್ಗೆ 6ರವರೆಗೆ ಮದ್ಯ ಮರಾಟಕ್ಕೆ ಅವಕಾಶ ಇರುವುದಿಲ್ಲ ಎಂದು ಅಬಕಾರಿ ಇಲಾಖೆ ಆದೇಶ ನೀಡಿದೆ. ಇನ್ನು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಿಂದ ರಾಜ್ಯಕ್ಕೆ ಮದ್ಯ ಸರಬರಾಜಾಗುವ ಸಾಧ್ಯತೆ ಇದ್ದು, ಈಗಾಗಲೇ ಅಲ್ಲಿಗೂ ಕೂಡ ಡ್ರೈ ಡೇ (ಒಣ ದಿನ)ಗೆ ಸೂಚನೆ ನೀಡಲಾಗಿದೆ.
ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್, ರೀಟೇಲ್ ಮಾರಾಟ ಮಳಿಗೆಗಳ ಮೇಲೆ ನಿಗಾವಹಿಸಲಾಗುತ್ತಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮದ್ಯ ಸಾಗಾಟ ಹಾಗೂ ಮಾರಾಟದ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿ ಛಲವಾದಿ ತಿಳಿಸಿದ್ದಾರೆ.
ಈಗಾಗಲೇ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್, ಪಬ್, ಫೈವ್ ಸ್ಟಾರ್ ಹೋಟೆಲ್ಗಳಲ್ಲೂ ಮದ್ಯ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ