Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಜೂನ್ 1ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Udupinews

 


ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಎಲ್ಲಾ ರೀತಿಯ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ ಅಳವಡಿಸಿರುವ 10 ಅಶ್ವಶಕ್ತಿ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳು ಈ ಅವಧಿಯಲ್ಲಿ ಕರಾವಳಿಯಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.

ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಜಿಲ್ಲಾ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo