Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕುಂದಾಪುರ:-ಸಮುದ್ರ ತೀರಕ್ಕೆ ಅಪ್ಪಳಿಸಿದ ಮೀನುಗಾರಿಕೆ ಬೋಟ್; 12 ಲಕ್ಷ ನಷ್ಟ

Udupinews

 
ಕೋಟ:ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲೀಕತ್ವದ ಶ್ರೀ ದುರ್ಗಾಪರಮೇಶ್ವರಿ ರುಕ್ಮಯ್ಯ ಹೆಸರಿನ ಬೋಟ್ ಪಾರಂಪಳ್ಳಿ ಪಡುಕರೆ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ತೇಲಿ ಬಂದ ಬಲೆಯು ಬೋಟಿನ ಪ್ಯಾನಿಗೆ ಸಿಲುಕಿದ ಪರಿಣಾಮ ಬೋಟ್ ನ ಇಂಜಿನ್ ಸ್ಥಬದ್ದಗೊಂಡಿತ್ತು. ಅಕ್ಕಪಕ್ಕದ ಬೋಟ್ ಗಳು ಸಹಾಯಕ್ಕೆ ಬಂದರೂ ಕೂಡ ಪ್ರಯೋಜನವಾಗದೆ ಗಾಳಿಯ ರಭಸಕ್ಕೆ ಮರಳು ದಿಬ್ಬಕ್ಕೆ ಬಡಿದು ಮುಳುಗಲಾರಂಭಿಸಿದೆ.

ಬೋಟಿನಲ್ಲಿದ್ದ ಕಾರ್ಮಿಕರನ್ನ ಸುರಕ್ಷಿತವಾಗಿ ಬೇರೆ ಬೋಟಿನವರು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾದರು ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ

ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳು ಹಾಗೂ ಮೀನುಗಾರಿಕೆ ಪರಿಕರಗಳು ಬೋಟಿನೊಂದಿಗೆ ಮುಳುಗಡೆಯಾಗಿದ್ದು ಸುಮಾರು ಅಂದಾಜು 12 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo