ಕಳೆದ ಒಂದೂವರೆ ತಿಂಗಳಿಂದ ಸೂರ್ಯನ ತಾಪಮಾನ ಹೆಚ್ಚಳದಿಂದ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬಸವಳಿದಿದ್ದಾರೆ. ಹೀಗಾಗಿ ಜನರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಮೇ 7 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ಎಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 6ರಿಂದ 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 6ರಿಂದ 9ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ