ಉಡುಪಿ/ದ.ಕ:- ರಾಜ್ಯದ ಕರಾವಳಿ ತೀರದಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ಗಂಟೆಗಳಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಹೀಗಾಗಿ ಮರಗಳ ಬಳಿ ನಿಲ್ಲದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಮನೆಯಿಂದ ಹೊರಗೆ ಇರುವವರು ಆದಷ್ಟು ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚಿಸಲಾಗಿದೆ. ಗಾಳಿ, ಮಳೆ ಇರುವಾಗ ವಾಹನವನ್ನು ಚಲಾಯಿಸುವಾಗ ಎಚ್ಚರದಿಂದ ಇರುವಂತೆ ಸಲಹೆ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ