ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದೂರು ದಾಖಲಿಸಿದ್ದಾರೆ. ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ ವಿಜಯೋತ್ಸವ ಸಭೆಯಲ್ಲಿ ಮುತಾಲಿಕ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದರು. ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್ ಎಂದು ನೇರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪ್ರಮೋದ್ ಮುತಾಲಿಕ್ ಇಂದು ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಮತ್ತು ಪ್ರಮೋದ್ ಮುತಾಲಿಕ್ ಮುಖಾಮುಖಿಯಾಗಿದ್ದರು. ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕೇವಲ ಸುಮಾರು 4 ಸಾವಿರ ಮತಗಳನ್ನು ಪಡೆದುಕೊಂಡಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ