ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಬ್ರಿಜ್‌ಭೂಷಣ್‌ರನ್ನು ಬಂಧಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ತಾವು ಗೆದ್ದ ಪದಕಗಳನ್ನು ಮಂಗಳವಾರ ಗಂಗಾ ನದಿಗೆ ಎಸೆಯಲು ಮುಂದಾಗಿದ್ದರು.
ಕುಸ್ತಿಪಟುಗಳು ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದರಿಂದ ನ್ಯಾಯಾಲಯ ನನ್ನನ್ನು ನೇಣಿಗೆ ಹಾಕುವುದಿಲ್ಲ. ಇದರಿಂದ ನನಗೆ ಗಲ್ಲು ಶಿಕ್ಷೆಯಾಗುವುದಿಲ್ಲ, ನನ್ನ ವಿರುದ್ಧ ಅವರು ಸಾಕ್ಷ್ಯಗಳನ್ನು ಸಲ್ಲಿಸಬೇಕು ಅಂತಾ ಹೇಳಿದ್ದಾರೆ.
ನನ್ನ ವಿರುದ್ಧದ ಆರೋಪ ಸಾಬೀತಾದರೆ ನಾನು ಯಾವುದೇ ರೀತಿಯ ಶಿಕ್ಷೆಯನ್ನು ಅನುಭವಿಸಲು ಸಿದ್ಧನಿದ್ದೇನೆ. ನ್ಯಾಯಾಲಯವು ನನಗೆ ಗಲ್ಲು ಶಿಕ್ಷೆ ವಿಧಿಸಿದರೂ ಅದಕ್ಕೆ ನಾನು ಸಿದ್ಧನಿದ್ದೇನೆ. ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಅಂತಾ ಹೇಳಿದ್ದಾರೆ.
ನನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಾಕ್ಷಿ ಇದ್ದರೂ ನ್ಯಾಯಾಲಯಕ್ಕೆ ಸಲ್ಲಿಸಿರಿ. ನಾನು ಯಾವುದೇ ರೀತಿಯ ಶಿಕ್ಷೆಯನ್ನು ಅನುಭವಿಸಲು ಸಿದ್ಧನಿದ್ದೇನೆ ಅಂತಾ ಬ್ರಿಜ್ ಭೂಷನ್ ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಸವಾಲು ಹಾಕಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್‍ಭೂಷನ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೊಗಟ್ ಹರಿದ್ವಾರದ ಗಂಗಾ ನದಿಗೆ ಪದಕಗಳನ್ನು ಎಸೆಯಲು ಮುಂದಾಗಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ