Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ಸಲ್ಲಿಕೆ

Udupifirst-udupinews-

 


ಬೆಂಗಳೂರು: ಕಾಂಗ್ರಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಇಂದು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದ ನಂತ್ರ, ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113ರ ಗಡಿದಾಟಿ 136 ಸೀಟುಗಳನ್ನು ಗೆದ್ದಿದೆ.

ಚುನಾವಣಾ ಆಯೋಗದ ಮಾಹಿತಿಯಂತೆ ಬಿಜೆಪಿ 65 ಕ್ಷೇತ್ರಗಳಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ, ಜೆಡಿಎಸ್ 19 ಕ್ಷೇತ್ರಗಳಲ್ಲಿ ಪಕ್ಷೇತರರು ಎರಡು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಒಬ್ಬರು, ಸರ್ವೋದಯ ಪಕ್ಷದಿಂದ ಒಬ್ಬರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 224 ಕ್ಷೇತ್ರಗಳಲ್ಲಿ 223 ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದಿದೆ. ಈ ಬೆನ್ನಲ್ಲೆ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo