Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯದ 224 ಕ್ಷೇತ್ರಗಳಲ್ಲಿ ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಪ್ರಾರಂಭ; ಎಲ್ಲರ ಚಿತ್ತ ಫಲಿತಾಂಶದತ್ತ

Udupifirst-udupinews-

 


ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದಿದ್ದು, ಇಂದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ 2615 ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಜ್ಯದ 58,545 ಮತಗಟ್ಟೆಗಳಲ್ಲಿನ ಮತದಾರರು ಅಖಾಡದಲ್ಲಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆದಿದ್ದು, ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದೆ. ಮಧ್ಯಾಹ್ನದ ವೇಳೆಗೆ ಹಣೆಬರಹ ಹೊರಬೀಳಲಿದೆ. 2430 ಪುರುಷ ಅಭ್ಯರ್ಥಿಗಳು, 184 ಮಹಿಳೆಯರು, ಇಬ್ಬರು ತೃತೀಯ ಲಿಂಗಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬಿಜೆಪಿಯ 224, ಕಾಂಗ್ರೆಸ್​​ನ 223, ಜೆಡಿಎಸ್​​ನ 207, ಎಎಪಿಯ 209, ಬಿಎಸ್‌ಪಿಯ 133, ಸಿಪಿಐ(ಎಂ)ನ 4, ಜೆಡಿಯು ಪಕ್ಷದ 8, ಎನ್‌ಪಿಪಿ 2, ಪಕ್ಷೇತರ 918, ನೋಂದಾಯಿತ, ಮಾನ್ಯತೆ ರಹಿತ 685 ಅಭ್ಯರ್ಥಿಗಳಿದ್ದಾರೆ.

ಮತದಾನ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಅವರ ಕರ್ತವ್ಯಕ್ಕೆ ಅನುಗುಣವಾಗಿ ಪ್ರವೇಶ ಪತ್ರ ಅಥವಾ ಗುರುತಿನ ಚೀಟಿಗಳನ್ನು ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ನೀಡಿರುತ್ತಾರೆ. ನಿಯೋಜಿತಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ತಮಗೆ ನೀಡಿರುವ ಪಾಸ್‍ಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ಭದ್ರತಾ ಸಿಬ್ಬಂದಿಗಳು ಕೇಳಿದಾಗ ತಕ್ಷಣ ತೋರಿಸಬೇಕು. ಅನಾವಶ್ಯಕ ಗೊಂದಲ, ವಾದಗಳಿಗೆ ಅವಕಾಶವಿರುವುದಿಲ್ಲ. ಹಾಗೂ ಮತ ಎಣಿಕಾ ಕೇಂದ್ರಕ್ಕೆ ಬರುವವರು ನೀರಿನ ಬಾಟಲ್, ಮೊಬೈಲ್, ಕಡ್ಡಿಪೆಟ್ಟಿಗೆ, ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗಡೆ ತರದಂತೆ ನಿಷೇಧಿಸಲಾಗಿದೆ. ಪ್ರತಿಯೊಬ್ಬರು ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಮತ್ತು ಈ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ಕಾನೂನು, ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಕೋರಲಾಗಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo