ಉಡುಪಿ : ನಗರದ ಬೋರ್ಡ್ ಕಾಲೇಜು ಹತ್ತಿರದಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2:00 ಗಂಟೆಯ ಸುಮಾರಿಗೆ ಬೋರ್ಡ್ ಕಾಲೇಜು ಸಮೀಪವಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಏಕಾಏಕಿ ಬೆಂಕಿ ತಗುಲಿದ್ದು ಟ್ರಾನ್ಸ್ ಫಾರ್ಮರ್ ಬೆಂಕಿಗಾಹುತಿ ಆಗಿದೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ