ಉಡುಪಿ: ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜತೆ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ತೋರಿ ಚಪ್ಪಲಿಯೇಟು ತಿಂದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಕ್ವಾಡಿಯಲ್ಲಿ ನಡೆದಿದೆ.
ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲಿ ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್ನನ್ನು ವಿಚಾರಿಸಿದ್ದಾರೆ. ನಂತರ ವಿದ್ಯಾರ್ಥಿನಿಯು ನಜೀರ್ಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಆ ಬಳಿಕ ಸ್ಥಳಿಯರು ನಜೀರ್ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ