ಖ್ಯಾತ ಸ್ಯಾಕ್ಸೋಫೋನ್ ವಾದಕ ಮೂಡು ಅಲೆವೂರು ನಿವಾಸಿ ಸುಂದರ ಸೇರಿಗಾರ್ ಅವರು ಇಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 76ವರ್ಷ ವಯಸ್ಸಾಗಿತ್ತು.
ಖ್ಯಾತ ಸಾಕ್ಸೋಫೋನ್ ಕಲಾವಿದರಾಗಿದ್ದ ಇವರು ಸ್ಯಾಕ್ಸೊಫೋನ್ ಕಲಾ ತರಗತಿಯನ್ನು ಆರಂಭಿಸಿ, ಸಾವಿರಾರು ಮಂದಿ ಶಿಷ್ಯರಿಗೆ ಕಲೆಯನ್ನು ಧಾರೆ ಎರೆದಿದ್ದಾರೆ.
ಹೆಣ್ಣು ಮಕ್ಕಳಿಗೆ ಪ್ರಪ್ರಥಮ ಬಾರಿ ಸ್ಯಾಕ್ಸೋಫೋನ್ ಕಲೆಯನ್ನು ಕಲಿಸಿದ ಕೀರ್ತಿ ಇವರದ್ದಾಗಿದೆ. ಇವರ ಕಲಾಸೇವೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸ್ಯಾಕ್ಸೊಫೋನ್ ವಾದಕರಾಗಿ ದೇಶ ವಿದೇಶಗಳಲ್ಲಿ ಪ್ರಸಿದ್ಧರಾಗಿದ್ದ ಇವರಿಗೆ ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಪತ್ನಿ ಇದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ