ಉಡುಪಿ : ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು ಕಂಡುಬರುತ್ತಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಭಾಗವಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮಳೆಯ ಅಬ್ಬರ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬಿರುಗಾಳಿಯು ಗಂಟೆಗೆ 55- 65 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಇನ್ನು ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡುವ ಸಂಬಂಧ ಜಿಲ್ಲಾಡಳಿತವು ಯಾವುದೇ ತೀರ್ಮಾನ ಮಾಡಿಲ್ಲ ಎನ್ನಲಾಗಿದೆ.
Nale raje andre beg Hali
ಪ್ರತ್ಯುತ್ತರಅಳಿಸಿ