ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಶರದ್ ಪವಾರ್ ನೇತೃತ್ವದ ಎನ್‍ಸಿಪಿ ಇಂದು ವಿಭಜನೆಗೊಂಡಿದೆ. ರಾಜಕೀಯ ದಿಗ್ಗಜ ಶರದ್ ಪವಾರ್ ಅವರ ಸಂಬಂಧಿ ಹಾಗೂ ಪ್ರಭಾವಿ ನಾಯಕ ಅಜಿತ್ ಪವಾರ್ ಅವರು ಇಂದು ತಮಗೆ 29 ಶಾಸಕರ ಬೆಂಬಲದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ಶಿಂಧೆ ನೇತೃತ್ವದ ಬಿಜೆಪಿ ಶಿವಸೇನೆ ಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.
ಇದರ ನಡುವೆಯೇ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸಿದ್ದಾರೆ. ಕಳೆದ ಹಲವು ತಿಂಗಳಿನಿಂದ ನಡೆದಿದ್ದ ರಾಜಕೀಯ ವಿದ್ಯಮಾನ ಇಂದು ಕ್ಲೈಮ್ಯಾಕ್ಸ್ ಹಂತ ತಲುಪಿ ಎನ್‍ಸಿಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಆಡಳಿತಾರೂಢ ಶಿವಸೇನೆ ಬಿಜೆಪಿ ಮೈತ್ರಿಗೆ ಹೊಸ ಮಿತ್ರರಾಗಿ ಅಜಿತ್ ಬಣ ಸೇರಿಕೊಂಡಿದೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗೂ ಮುನ್ನವೇ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನು ಉಂಟುಮಾಡಿದೆ. ರಾಜಭವನದಲ್ಲಿಂದು ನಡೆದ ಸಮಾರಂಬದಲ್ಲಿ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ರಾಜ್ಯಪಾಲ ರಮೇಶ್ ಬೈಸ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ 8 ಮಂದಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈಗಾಗಲೇ ಶಿವಸೇನೆ ಹೊಡೆದು ಚೂರಾಗಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಬಿಜೆಪಿಯ ಡಿಸಿಎಂ ಪಟ್ನಾವಿಸ್ ಅವರ ಜೊತೆ ಈಗ ಎನ್‍ಸಿಪಿ ಬಣ ಕೂಡ ಸೇರಿಕೊಂಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ