Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ರಾಜ್ಯ ಸರ್ಕಾರ ನಿಷೇಧ

Udupi

 


ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ.

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಆದೇಶದದಲ್ಲಿಸೂಚಿಸಲಾಗಿದೆ.

ಉಡುಪಿ ಜಿಲ್ಲೆಗೆ ಸಂಬಂಧಿತ ಯಾವುದೇ ಸುದ್ದಿ ಅಥವಾ ವೀಡಿಯೋ‌ಗಳನ್ನು ನಮಗೆ ಕಳುಹಿಸಿ ನಾವು ನಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ WHATSAPP NUMBER:-9845507611





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo