ನವದೆಹಲಿ: ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಮಣಿಪುರ ಹಿಂಸಾಚಾರದ ಕುರಿತು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, 'ಮಣಿಪುರದ ಹಿಂಸಾಚಾದ ಘಟನೆ ಕಂಡು ನನಗೆ ಅತೀವ ದುಃಖ ಉಂಟಾಗಿದೆ. ಯಾವುದೇ ನಾಗರಿಕ ಸಮಾಜಕ್ಕೆ ಇದು ನಾಚಿಕೆಗೇಡಿನ ಸಂಗತಿ. ತಪ್ಪಿತಸ್ಥರನ್ನು ಎಂದಿಗೂ ಬಿಡುವುದಿಲ್ಲ, ಘಟನೆಯ ಹಿಂದಿರುವವರನ್ನು ಖಂಡಿತ ಕ್ಷಮಿಸುವುದಿಲ್ಲ' ಎಂದು ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ