Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮೀನುಗಾರರಿಗೆ ಸಾಮೂಹಿಕ ಅಪಘಾತ ವಿಮಾ ಯೋಜನೆ

Udupi


ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

    ಮೀನುಗಾರಿಕೆ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ಮೀನುಗಾರರ ಹಾಗೂ ವಿಮೆ ಸೌಲಭ್ಯಕ್ಕಾಗಿ ನಾಮನಿರ್ದೇಶನ ಮಾಡುವ ಕುಟುಂಬ ಸದಸ್ಯರ ಪಾನ್ (ಪರ್ಮನೆಂಟ್ ಅಕೌಂಟ್ ನಂಬರ್) ಪ್ರತಿ ಹಾಗೂ ಇತರೆ ವಿವರಗಳನ್ನು ತಾವು ಸದಸ್ಯತ್ವ ಹೊಂದಿರುವ ಮೀನುಗಾರಿಕೆ ಸಹಕಾರಿ ಸಂಘಕ್ಕೆ ಜುಲೈ 28 ರ ಒಳಗೆ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಸಂಬಂಧಿತ ಯಾವುದೇ ಸುದ್ದಿ ಹಾಗೂ ವೀಡಿಯೋ‌ಗಳನ್ನು ನಮಗೆ ಕಳುಹಿಸಿ ನಾವು ನಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ WHATSAPP NUMBER:-9845507611





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo