ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸುರಿಯುವ ಲಕ್ಷಣಗಳು ಕಾಣಿಸುತ್ತಿದ್ದು, ಕರಾವಳಿ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ನೆಚ್ಚರಿಕೆ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆ.3ಕ್ಕೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಮುಂದಿನೊಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ