Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ; ಬಿಜೆಪಿಯ 10 ಶಾಸಕರು ಅಮಾನತು..!

Udupi

 


ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಸಭ್ಯವಾಗಿ ವರ್ತನೆ ತೋರಿದ ಆರೋಪದ ಮೇಲೆ ಬಿಜೆಪಿಯ 10 ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಡಾ.ಸಿಎನ್ ಅಶ್ವತ್ಥನಾರಾಯಣ್, ವಿ.ಸುನೀಲ್ ಕುಮಾರ್, ಆರ್ ಅಶೋಕ್, ವೇದವ್ಯಾಸ ಕಾಮತ್, ಯಶಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮರ್ ನಾಥ್ ಕೋಟ್ಯನ್,ಅರವಿಂದ್ ಬೆಲ್ಲದ್, ಅರಗ ಜ್ಞಾನೇಂದ್ರ, ವೈ ಭರತ್ ಶೆಟ್ಟಿ ಅವರನ್ನು ಸದನ ಮುಗಿಯುವವರೆಗೂ ಅಮಾನತುಗೊಳಿಸುವಂತೆ ಸಚಿವ ಹೆಚ್ ಕೆ ಪಾಟೀಲ್ ಅವರು ಮಂಡಿಸಿದರು.

ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಮತಕ್ಕೆ ಹಾಕುತ್ತಿದ್ದೇನೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಧಿವೇಶನ ಮುಗಿಯುವವರೆಗೂ ಸದನದಿಂದ ಅಮಾನತುಗೊಳಿಸಿ ಆದೇಶಿಸಿದರು.

ಗುರುವಾರ ಮತ್ತು ಶುಕ್ರವಾರ 2 ದಿನಗಳ ಕಾಲ ಅಧಿವೇಶನ ಬಾಕಿ ಉಳಿದಿದೆ. ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಅಮಾನತು ಮಾಡಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ .





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo