ಮಣಿಪಾಲ:ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದು ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಜು. 15 ರಂದು ಶನಿವಾರ ಸಂಜೆ ನಡೆದಿದೆ.
ಉಡುಪಿಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕ ಅತೀ ವೇಗ ಹಾಗೂ ಅಜಾಗ್ರಕತೆಯಿಂದ ಚಲಾಯಿಸಿಕೊಂಡು ಬಂದು ಮಣಿಪಾಲ ಟೈಗರ್ ಸರ್ಕಲ್ ಬಳಿ ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕ್ ಗೆ ನೇರ ಡಿಕ್ಕಿ ಹೊಡೆದು ಬೈಕ್ ಸಮೇತ ಬಸ್ಸಿನಡಿಗೆ ಸಿಲುಕಿಕೊಂಡ ದಂಪತಿಗಳು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ದಂಪತಿಗಳನ್ನು ತಕ್ಷಣ ಕೆಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಗೊಂಡ ದಂಪತಿಗಳ ವಿವರ ತಿಳಿದು ಬಂದಿಲ್ಲ.ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ