ಉಡುಪಿ:ಧರ್ಮಸ್ಥಳದ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯ ಬದ್ಧ ಮೂಲ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಜುಲೈ23ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ತಿಳಿಸಿದ್ದಾರೆ.
10.30 ಉಡುಪಿಯ ಸರ್ವಿಸ್ ಬಸ್ಸ್ ನಿಲ್ದಾಣ ಸಮೀಪದ ಬೋರ್ಡ್ ಹೈಸ್ಕೂಲ್ ಬಳಿ ಬೆಳಿಗೆ ಕ್ಕೆ ನಡೆಯುವ ಈ ಪ್ರತಿಭಟನೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯ ಹೈಕೋರ್ಟ್ ವಕೀಲರಾದ ಶ್ರೀನಿವಾಸ್,ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ,ಬೆಳ್ತಂಗಡಿಯ ಪ್ರಗತಿಪರ ಹೋರಾಟಗಾರ ಶೇಖರ್ ಲಾಯಿಲ,ಚಿಂತಕ ಶ್ರೀರಾಮ ದಿವಾಣ ಹಾಗೂ ಇತರ ಬುದ್ಧಿಜೀವಿಗಳು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ