ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ.
ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ ಎಂಬ ಮಾಹಿತಿ ಇದೆ. ಮೃತರು , ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ