Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಭಾರೀ ಮಳೆ ಹಿನ್ನೆಲೆ; ಮಂಗಳೂರು ವಿವಿಯ ಜು.25ರ ಎಲ್ಲಾ ಪರೀಕ್ಷೆ ಮುಂದೂಡಿಕೆ

Udupi

 


ಮಂಗಳೂರು ವಿವಿ ಸೆಮಿಸ್ಟರ್‌ ಪರೀಕ್ಷೆಗಳನ್ನು ಮುಂದೂಡಿ ವಿವಿ ಆಡಳಿತ ಮಂಡಳಿ ಆದೇಶಿಸಿದೆ. ಭಾರಿ ಮಳೆಯ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.

ಆದರೆ ಈ ಸಮಯದಲ್ಲಿಯೂ ಮಂಗಳೂರು ವಿವಿ ಸೆಮಿಸ್ಟರ್‌ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದಕ್ಕೆ ತೀವ್ರ ತೊಂದರೆಯಾಗಿತ್ತು. ಅಲ್ಲದೆ ಸುಬ್ರಹ್ಮಣ್ಯ ಕೆಎಸ್‌ಎಸ್‌ ಕಾಲೇಜು ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲಿಯೇ ಸಂಚರಿಸಿ ಪರೀಕ್ಷಾ ಕೇಂದ್ರಗಳಿಗೆ ತಲುಪಿದ ಚಿತ್ರಗಳು ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಹಿನ್ನಲೆಯಲ್ಲಿ ಮಂಗಳೂರು ವಿವಿ ಸೆಮಿಸ್ಟರ್‌ ಪರೀಕ್ಷೆಗಳನ್ನು ಮುಂದೂಡಿದೆ.

ಜುಲೈ 25 ರಂದು ನಡೆಯಬೇಕಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ವಿವಿ ಸೋಮವಾರ ಪ್ರಕಟಣೆ ಹೊರಡಿಸಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo