ಬೈಂದೂರು: ತಾಲೂಕು ವ್ಯಾಪ್ತಿಯ ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಇಬ್ಬರು ನೀರುಪಾಲಾದ ಘಟನೆ ಇಂದು ಸಂಭವಿಸಿದೆ. ನಾಗೇಶ್ (30) ಮತ್ತು ಸತೀಶ್ (29) ನೀರುಪಾಲಾದ ನತದೃಷ್ಟರು.
ಸಚಿನ್ ಎಂಬವರ ಮಾಲಕತ್ವದ ದೋಣಿಯು ಅಲೆಗಳ ಹೊಡೆತಕ್ಕೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಕಡಲು ಪಾಲಾದ ಮೀನುಗಾರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ದೋಣಿಯಲ್ಲಿ ಒಟ್ಟು 6 ಮಂದಿ ಇದ್ದರು. ಉಳಿದ ನಾಲ್ವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ