ಉಡುಪಿ: ಬೈಕ್ ನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಸವಾರ ಸಾವನಪ್ಪಿದ ಘಟನೆ ತಡರಾತ್ರಿ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ.
ಮೃತರನ್ನು ಕಾರ್ಕಳ ತಾಲೂಕಿನ ಪಿಲಾರುಕಾನ ನಿವಾಸಿ ಪ್ರವೀಣ್ ಆಚಾರ್ಯ (30) ಎಂದು ಗುರುತಿಸಲಾಗಿದೆ. ಇವರು ಕಾರ್ಕಳದಿಂದ ಗುರುವಾರ ರಾತ್ರಿ ಮನೆಯತ್ತ ತೆರಳುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಏಕಾಏಕಿ ಉರುಳಿ ಬಿದ್ದಿದೆ. ಮರದಡಿ ಸಿಲುಕಿ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ