ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.
ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ