ಮಂಗಳೂರು: ಧರ್ಮಸ್ಥಳದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್‌ನಿಂದ ಜಡ್ಜ್‌ಮೆಂಟ್ ಬಂದಿದೆ. ಈ ಬಗ್ಗೆ ನಾನು ಲಾಯರ್ ಆಗಿ ಹೇಳೋದಾದರೆ ಹೈಕೋರ್ಟ್‌ಗೆ ಅಪೀಲ್ ಹೋಗಬೇಕು. ಸಿಬಿಐ ಕೋರ್ಟ್ ಜಡ್ಜ್‌ಮೆಂಟ್ ಕಾಪಿಯನ್ನು ಓದಿ ಅಪೀಲ್‌ಗೆ ಹೋಗಲು ಅವಕಾಶವಿದೆಯೇ ಎಂಬುದನ್ನು ನೋಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಜಪೆ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕೊಟ್ಟಿತ್ತು. ಆದರೆ, ಸೌಜನ್ಯಾಳ ಪೋಷಕರು ಮರು ತನಿಖೆ ಮಾಡುವಂತೆ ಸರ್ಕಾರಕ್ಕೆ ಬಮದು ಮನವಿ ಮಾಡಿದ್ದಾರೆ. ಆದರೆ, ಕಾನೂನು ಪ್ರಕಾರ ಏನಾಗಬೇಕು ಅಂತ ನೋಡಿ ಮುಂದಿನ ನಿರ್ಧಾರವನ್ನು ಮಾಡುತ್ತೇವೆ. ನಾನು ಲಾಯರ್ ಆಗಿ ಹೇಳೋದಾದರೆ ಇದರ ಬಗ್ಗೆ ಹೈಕೋರ್ಟ್‌ಗೆ ಅಪೀಲ್ ಹೋಗಬೇಕಾಗುತ್ತದೆ ಎಂದು ತಿಳಿಸಿದರು.
ಇನ್ನು ಈಗಾಗಲೇ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಆದರೆ ಅವರ ಪೋಷಕರು ಹಾಗೂ ಹೋರಾಟಗಾರರು ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದು, ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ, ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ