ಮುಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ರವರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮುಲ್ಕಿಯ ತಮ್ಮ ಆಶ್ರಮದಲ್ಲಿ ಗೌರವಿಸಿದರು.
ಈ ಸಂದರ್ಭ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ ಸರ್ವ ಜನಾಂಗದ ಅಭಿವೃದ್ಧಿಗೆ ಪಣತೊಟ್ಟು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು ಎಂದರು.
ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್,ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ