ಉಡುಪಿ: ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ.
ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ಇಲ್ಲಿ ಕಾಣಬಹುದು.ಈ ಅಪಾಯಕಾರಿ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಯುವಕರ ಹುಚ್ಚಾಟದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ