ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ.
ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಗೋವು ಅಥವಾ ಹಸುವನ್ನು ರಕ್ಷಿಸುವ ಸಲುವಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆಯೇ ಎಂದು ಸಂಸ್ಕೃತಿ ಸಚಿವಾಲಯವನ್ನು ಬಿಜೆಪಿ ಸಂಸದ ಭಗೀರಥ ಚೌಧರಿ ಅವರು ಕೇಳಿದ್ದಾರೆ.
ಭಗೀರಥ ಚೌಧರಿ ಅವರ ಪ್ರಶ್ನೆಗೆ ಉತ್ತರಿಸಿದ ಕಿಶನ್ ರೆಡ್ಡಿ, ಭಾರತ ಸರ್ಕಾರವು ಹುಲಿ ಮತ್ತು ನವಿಲುಗಳನ್ನು ಕ್ರಮವಾಗಿ 'ರಾಷ್ಟ್ರೀಯ ಪ್ರಾಣಿ' ಮತ್ತು 'ರಾಷ್ಟ್ರೀಯ ಪಕ್ಷಿ' ಎಂದು ಸೂಚಿಸಿದೆ ಮತ್ತು ಇವೆರಡನ್ನೂ 1972ರ ವನ್ಯಜೀವಿ (ರಕ್ಷಣೆ) ಕಾಯಿದೆಯ ಶೆಡ್ಯೂಲ್-1 ರಲ್ಲಿ ಸೇರಿಸಲಾಗಿದೆ. ಇದನ್ನು 2011ರ ಮೇ 11 ರಂದು ಮತ್ತೊಮ್ಮೆ ಪರಿಷ್ಕರಿಸಲಾಗಿತ್ತು. ಹೀಗಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ