ಉಡುಪಿ: ನಗರದ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ನಿನ್ನೆ ಸಿಐಡಿಗೆ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ಅಂಜುಮಾಲಾ ನೇತೃತ್ವದ ಸಿಐಡಿ ತಂಡ ಉಡುಪಿಗೆ ಆಗಮಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವೀಡಿಯೋ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದೆ. ಇನ್ನು ಪ್ರಕರಣದ ತನಿಖೆಗೆ ಸಿಐಡಿ ತಂಡ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ