ಪುಂಜಾಲಕಟ್ಟೆ: ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.
ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (23) ಮೃತಪಟ್ಟವರಾಗಿದ್ದಾರೆ.
ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದಾರೆ. ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‌ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು.
ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿಯೊಂದಿಗೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತಪಟ್ಟಿರುವುದು ತಿಳಿದು ಬಂದಿದೆ. ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತವೇ ಕಾರಣವೆಂದು ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ. ಮಿತ್ರಾ ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಯುವತಿಯ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ