ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ. ಜುಲೈ 31ರಂದು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ನೇಜಾರು ಕೆಮ್ಮಣ್ಣು ರಸ್ತೆಯ ಕೆ.ಸುಂದರ(64) ಎಂದು ಗುರುತಿಸ ಲಾಗಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದೆ.
ಇದರಿಂದ ಮಾನಸಿಕ ವಾಗಿ ಮನನೊಂದು ಅವರು ಕುಂಜಿಬೆಟ್ಟುವಿನಲ್ಲಿರುವ ತನ್ನ ತಾಯಿ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ