ಅಜೆಕಾರು: ಕಾರ್ಕಳ ತಾಲೂಕು ಎಣ್ಣೆಹೊಳೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಬಿ. ಅವರನ್ನು ಕರ್ತವ್ಯ ಲೋಪದಡಿ ಸೇವೆಯಿಂದ ವಜಾ ಮಾಡಲಾಗಿದೆ.
ಅವರು ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾಗೂ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ದಾಖಲಾದ ದೂರಿಗೆ ಸಂಬಂಧಿಸಿದಂತೆ, ಇಲಾಖೆಯ ವಿಚಾರಣ ವರದಿಯ ಅನ್ವಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ, ಕರ್ನಾಟಕ ನಾಗರಿಕ ಸೇವಾ ನಿಯಮಗಳಂತೆ ಸರಕಾರಿ ಸೇವೆಯಿಂದ ವಜಾಗೊಳಿಸಲಾಗಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ