ಮಣಿಪಾಲ ಡಿಸಿ ಕಚೇರಿ ರಸ್ತೆಯಲ್ಲಿ ರೀಲ್ಸ್ ಶೋಕಿಗಾಗಿ ಯದ್ವಾ ತದ್ವಾ ಸ್ಕೂಟರ್ ಚಲಾಯಿಸಿ ಇತರೆ ವಾಹನ ಸವಾರರಿಗೆ ತೊಂದರೆ ನೀಡಿದ್ದ ಯುವಕ ನನ್ನು ಮತ್ತು ಸ್ಕೂಟರ್ ವಶಕ್ಕೆ ಪಡೆದು ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪರ್ಕಳ ನಿವಾಸಿ ಆಶಿಕ್(19) ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡುತ್ತಿದ್ದ ಯುವಕ.
ಆಶಿಕ್ ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ. ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ವಿಡಿಯೋದಲ್ಲಿ ಕಾಣಬಹುದು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ