Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Udupifirst-udupinews-

 


ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಆ.01) ಲೋಕಮಾನ್ಯ ತಿಲಕ್‌ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಮೊತ್ತದ 1 ಲಕ್ಷ ರೂ.ಗಳನ್ನು ನಮಾಮಿ ಗಂಗೆ ಯೋಜನೆಗೆ ನೀಡುವುದಾಗಿ ಮೋದಿ ಘೋಷಿಸಿದ್ದಾರೆ.

ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಿಲಕ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸಿರುವುದು ನನಗೆ ಗೌರವ ತಂದಿದೆ. ಪ್ರಶಸ್ತಿಯ ಹಣವನ್ನು ನಮಾಮಿ ಗಂಗೆ ಯೋಜನೆಗೆ ನೀಡಲು ನಿರ್ಣಯಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ರಶಸ್ತಿ ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಈ ದಿನ ನನಗೆ ಬಹಳ ಮುಖ್ಯವಾದ ಹಾಗೂ ನೆನಪಿನಲ್ಲಿರುವ ದಿನ. ಸ್ವಾತಂತ್ರ್ಯ ಹೋರಾಟದಲ್ಲಿ ತಿಲಕ್‌ರ ಪಾತ್ರವನ್ನು ಪದಗಳಲ್ಲಿ ಅಥವಾ ಕೆಲವು ಘಟನೆಗಳ ಮೂಲಕ ಹೇಳಲು ಸಾಧ್ಯವಿಲ್ಲ. ಈ ಪ್ರಶಸ್ತಿಯನ್ನ ದೇಶದ 140 ಕೋಟಿ ಜನರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo