Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಶಿವಮೊಗ್ಗ ಏರ್ಪೋರ್ಟ್‌ಗೆ ಬಂದ ಮೊದಲ ನಾಗರಿಕ ವಿಮಾನ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a

 


ಬೆಂಗಳೂರು : ಮಲೆನಾಡಿಗರ ಬಹು ದಿನಗಳ ಕನಸು ನನಸಾಗಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಇದೀಗ ಬಂದಿಳಿದಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಭರ್ಜರಿ ಸ್ವಾಗತ ಕೋರಲಾಯಿತು. ಮೊದಲ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಶಾಸಕ ಅರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸೇರಿ 72 ಮಂದಿ ಬಂದಿಳಿದರು.

ಬೆಳಗ್ಗೆ 9.50ಕ್ಕೆ ಹೊರಟ ಇಂಡಿಗೋ ಏರ್ ಲೈನ್ಸ್ ಗೆ ಸೇರಿದ ನಾಗರಿಕ ವಿಮಾನ ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ 55 ನಿಮಿಷದಲ್ಲಿ ಶಿವಮೊಗ್ಗಕ್ಕೆ ಲ್ಯಾಂಡ್ ಆಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣವು 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್ ಮತ್ತು 3,050 ಮೀಟರ್ ಉದ್ದದ ರನ್ವೇಯನ್ನು ಇದು ಒಳಗೊಂಡಿದೆ. ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo