Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಸೆ. 6 ರಂದು ಶ್ರೀಕೃಷ್ಣ ಜಯಂತಿ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆಯು ಸೆಪ್ಟಂಬರ್ 6 ರಂದು ಬೆಳಗ್ಗೆ 10.30 ಕ್ಕೆ ನಗರದ ವಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

   ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

   ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಎಸ್.ಎಲ್.ಭೋಜೆಗೌಡ ಹಾಗೂ ಡಾ.ತೇಜಸ್ವಿನಿ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ದಯಾನಂದ ಬಿ.ಆರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಳಕಾಡು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಲಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo