ಬೆಂಗಳೂರು;- ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ವಿಚಾರಣೆ ಆಲಿಸಿದ ನ್ಯಾಯಪೀಠ, 'ಸಭೆ-ಸಮಾರಂಭ, ಧರಣಿ ಹಾಗೂ ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದಿದ್ದರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಾನೂನಿನ ವ್ಯಾಪ್ತಿಯಲ್ಲಿಯೇ ನೋಡಬೇಕಾಗುತ್ತದೆ. ಹೀಗಾಗಿ, ಅರ್ಜಿದಾರರು ತಮ್ಮ ಅರ್ಜಿ ಹಿಂಪಡೆದು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು' ಎಂದು ತಿಳಿಸಿತು.
ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತರ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಪರಿಗಣಿಸಬಹುದಾಗಿದೆ' ಎಂದು ಹೇಳಿತು. ಅಂತೆಯೇ ಅರ್ಜಿ ಹಿಂಪಡೆಯಲು ಸೂಚಿಸಿತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ