ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಲಾಗಿದ್ದು, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಲಾ ಐವರಂತೆ 15 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಸೆ. 5ರಂದು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಪ್ರಾಥಮಿಕ ಶಾಲಾ ವಿಭಾಗ: ಬ್ರಹ್ಮಾವರ- ಪೆರ್ಡೂರು ಅನಂತ ಪದ್ಮನಾಭ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕೆ.ಅರುಣ್ ಕುಮಾರ್ ಶೆಟ್ಟಿ, ಕುಂದಾಪುರ- ಅಮಾಸೆಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಶಿಧರ್ ಶೆಟ್ಟಿ, ಬೈಂದೂರು- ಆಲೂರು ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರವೀಣ್ ಕುಮಾರ್ ಶೆಟ್ಟಿ, ಉಡುಪಿ- ಮಲ್ಪೆ ಗಾಂಧಿ ಶತಾಬ್ಧಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಂಕರ್, ಕಾರ್ಕಳ- ಮುಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೇವದಾಸ ಪಾಟ್ಕರ್.
ಪ್ರೌಢಶಾಲಾ ವಿಭಾಗ: ಬ್ರಹ್ಮಾವರ- ಆವರ್ಸೆ ಸರಕಾರಿ ಪ್ರೌಢಶಾಲೆಯ ರಮೇಶ್ ಕುಲಾಲ್, ಕುಂದಾಪುರ- ಕಂಡ್ಲೂರು ರಾಮನ್ಸ್ ಪ್ರೌಢಶಾಲೆಯ ಅಜಯ್ ಕುಮಾರ್ ಶೆಟ್ಟಿ, ಬೈಂದೂರು- ತಲ್ಲೂರು ಸರಕಾರಿ ಪ್ರೌಢಶಾಲೆಯ ಚನ್ನಯ್ಯ ಯು., ಉಡುಪಿ- ಮಣಿಪಾಲ ರಾಜೀವನಗರ ಸಂಯುಕ್ತ ಸರಕಾರಿ ಪ್ರೌಢಶಾಲೆಯ ಬಾಲಕೃಷ್ಣ ಪಿ., ಕಾರ್ಕಳ- ನಲ್ಲೂರು ಸರಕಾರಿ ಪ್ರೌಢಶಾಲೆಯ ಶಿವಸುಬ್ರಹ್ಮಣ್ಯ ಜಿ.ಭಟ್.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಬ್ರಹ್ಮಾವರ ವಲಯ- ಸಗ್ರಿನೋಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಘು ರಾಮ, ಕುಂದಾಪುರ ವಲಯ- ಕೋಣೆಹರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಯಶವಂತ್, ಬೈಂದೂರು- ಮರವಂತೆ ಪೂರ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸೀತಾ ಜೋಗಿ, ಉಡುಪಿ- ಮಲ್ಪೆ ಗಾಂಧಿ ಶತಾಬ್ಧಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶ್ಯಾಮಲ, ಕಾರ್ಕಳ- ಮುದ್ರಾಡಿ ಉಪ್ಪಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀನಿವಾಸ್ ಭಟ್.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ