ಉಡುಪಿ: ತಮಿಳುನಾಡಿನ ಸಿಎಂ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯ ನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬೆನ್ನಲ್ಲೇ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಅದರಂತೆ ಇಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೂಡ ಉದಯನಿಧಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ ಎನ್ ಡಿ ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ, ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸನಾತನ ಧರ್ಮ ಅಪಮಾನಿಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದರು.
ಸನಾತನ ಧರ್ಮ ಕೇವಲ ಒಂದು ಧರ್ಮವಾಗಿರದೇ ಭಾರತದ ಜನರ ಜೀವನ ಪದ್ಧತಿಯಾಗಿದ್ದು, ಕೇವಲ ಅಲ್ಪ ಸಂಖ್ಯಾತ ಓಲೈಕೆ, ಕ್ರೈಸ್ತ ಮತಾಂತರ ಸಂಸ್ಥೆಗಳ ಹಿಡನ್ ಅಜೆಂಡಾದ ಟೂಲ್ ಕಿಟ್ ಭಾಗವಾಗಿ ಉದಯನಿಧಿ ಬಹು ಸಂಖ್ಯಾತ ಹಿಂದೂ ದ್ವೇಷಿ ನಿಲುವು ತಾಳಿ ಓರ್ವ ಜವಾಬ್ದಾರಿ ಸಚಿವನಾಗಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.ಳ್ ಎಂದು ಆಕ್ರೋಶಗೊಂಡರು.
ತಮಿಳುನಾಡು ಸರ್ಕಾರ ಹಿಂದೂ ವಿರೋಧಿ ಹೇಳಿಕೆ ನೀಡಿದ ಉದಯನಿಧಿ ಯನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ