ಉಡುಪಿ: ರಾಷ್ಟ್ರಮಟ್ಟದ ಕ್ರೀಡಾಪಟುವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಉಡುಪಿ ಯಲ್ಲಿ ನಡೆದಿದೆ.
ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟುವಾಗಿದ್ದ ವಿರಾಜ್ ಮೆಂಡನ್ (29) ಮೃತರು.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ವಿರಾಜ್ ಮೆಂಡನ್ ವಾಸವಾಗಿದ್ದು, ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದರು.
ಸೋಮವಾರ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ