ಕುಂದಾಪುರ: ಓವರ್‌ಟೇಕ್ ಮಾಡುವ ಭರದಲ್ಲಿ ಕಾರೊಂದು ಆಟೋರಿಕ್ಷಾಕ್ಕೆ ಢಿಕ್ಕಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಮೂಡ್ಲಕಟ್ಟೆಯಲ್ಲಿ ಸಂಭವಿಸಿದೆ.
ಅಂಪಾರು ನಿವಾಸಿ ಅಂಬಿಕಾ (22) ಮೃತಪಟ್ಟವರು.
ಅಂಪಾರಿನಿಂದ ಕುಂದಾಪುರಕ್ಕೆ ಬಂದು ವಾಪಸು ಹೋಗುವ ವೇಳೆ ಅಂಪಾರಿನಿಂದ ಬರುತ್ತಿದ್ದ ಕಾರು ಬೇರೊಂದು ವಾಹನವನ್ನು ಓವರ್‌ಟೇಕ್ ಮಾಡುವ ವೇಳೆ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿಯಾಗಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಂಬಿಕಾ ಅವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದು, ಇನ್ನೋರ್ವ ಪ್ರಯಾಣಿಕರು, ರಿಕ್ಷಾ ಚಾಲಕ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರು ಚಾಲಕ ವಸಂತ ಅವರ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ