ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣವನ್ನು ಸರ್ಕಾರ ಇದೀಗ ಗಂಭೀರವಾಗಿ ಪರಿಗಣಿಸಿದ್ದು, ಬಿಎಸ್‌ವೈ ಶೀಘ್ರವೇ ಬಂಧನವಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ.
ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಬಿಎಸ್‌ವೈ ಬಂಧನಕ್ಕೂ ಸಿದ್ಧತೆ ನಡೆಸಿದೆ.
ಘಟನೆ ನಡೆದು ಹಲವು ತಿಂಗಳಾದರೂ ಪೊಲೀಸರು ಕ್ರಮ ಕೈಗೊಂಡಿಲ್ಲ, ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆದಿಲ್ಲ ಎಂದು ಸಂತ್ರಸ್ತೆಯ ಸಹೋದರ ಹೈಕೋರ್ಟ್‌ಗೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಈ ನಡುವೆ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ದೂರು ನೀಡಿದ್ದರು. ಫೆಬ್ರವರಿಯಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ