Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಫೋಕ್ಸೋ ಪ್ರಕರಣ:- BSYಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Udupi

 


ಬೆಂಗಳೂರು:- ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ. ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ನ್ಯಾಯಾಲಯ, ಜೂನ್ 17 ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಇನ್ನು ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಸಿಆರ್ಪಿಸಿ 41ಎ ಅಡಿ ಮಾ.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಏ.12ರಂದು ಬಿಎಸ್ವೈ ವಿಚಾರಣೆಗೆ ಹಾಜರಾಗಿದ್ದರು. 2ನೇ ನೋಟಿಸ್ಗೆ ಅವರು ಹಾಜರಾಗಿಲ್ಲ.

ಜೂ.17ರಂದು ಹಾಜರಾಗುವುದಾಗಿ ಬಿಎಸ್ವೈ ಉತ್ತರಿಸಿದ್ದಾರೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಎಫ್‌ಐಆರ್ ನಂತರ ತನಿಖೆ ಯಾವಾಗ ಆರಂಭವಾಯಿತು ಎಂದು ಹೈಕೋರ್ಟ್ ಪ್ರಶ್ನಿಸಿದ್ದು, ಮಾರ್ಚ್ 14ರ ಎಫ್‌ಐಆರ್ ನಂತರ ಏ.12ರಂದು ನೋಟಿಸ್ ನೀಡಿದ್ದಾರೆ. ಅಲ್ಲಿಯವರೆಗೆ ಪೊಲೀಸರು ಏನು ಮಾಡಿದರೆಂಬುದು ತಿಳಿದಿಲ್ಲ ಎಂದು ಸಿ.ವಿ.ನಾಗೇಶ್ ವಾದಿಸಿದರು

ಈಗ ಬಿಎಸ್ವೈ ಬಂಧನ ಏಕೆ ಬೇಕಾಗಿದೆ ಎಂದು ಹೈಕೋರ್ಟ್ ಮರು ಪ್ರಶ್ನಿಸಿದ್ದು, ಜೂನ್ 12ರಂದು ಹಾಜರಾಗುವಂತೆ ಬಿಎಸ್ವೈಗೆ ನೋಟಿಸ್ ನೀಡಲಾಗಿತ್ತು. ಮೊಬೈಲ್‌ನಲ್ಲಿದ್ದ ವಿಡಿಯೋ, ಧ್ವನಿ ಪರೀಕ್ಷೆ ನಂತರ ನೋಟಿಸ್ ನೀಡಲಾಯಿತು. ಹಾಜರಾಗದ ಕಾರಣಕ್ಕೆ ಬಂಧನದ ವಾರಂಟ್ ಪಡೆಯಲಾಗಿದೆ. ಮೇ 13ರಂದು ಎಫ್‌ಎಸ್‌ಎಲ್ ವರದಿ ಬಂದಿದೆ.

ಸುಟ್ಟ ಮೊಬೈಲ್ ಚಿಪ್ನಲ್ಲಿದ್ದ ಡಾಟಾ ತೆಗೆಯಲು ಗುಜರಾತ್ FSLಗೆ ಕಳುಹಿಸಲಾಯಿತು. ಅದಾದ ನಂತರ ಧ್ವನಿ ಪರೀಕ್ಷೆಗೆ ಬೆಂಗಳೂರು ಎಫ್‌ಎಸ್‌ಎಲ್ಗೆ ಕಳುಹಿಸಲಾಯಿತು ಎಂದು ಹೈಕೋರ್ಟ್ಗೆ ಎಡಿಜಿಪಿ ಬಿ.ಕೆ.ಸಿಂಗ್ ಹೇಳಿದ್ದಾರೆ. ಬಿಎಸ್ವೈ ಮನೆಯಲ್ಲಿಯೇ ಈ ಘಟನೆ ನಡೆದಿದೆ. ಅವರ ಮನೆಯಲ್ಲಿನ ಸಿಸಿ ಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ತನಿಖೆ ಹೇಗೆ ನಡೆಸಬೇಕೆಂಬುದನ್ನ ತನಿಖಾಧಿಕಾರಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo